Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:50 - ಕನ್ನಡ ಸಮಕಾಲಿಕ ಅನುವಾದ

50 ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಅಶೆ ರ್‍ಹಾತಾನಾ, ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಎವ್ಡೆಚ್ ಸಾಂಗುಕ್ ಬಗುಲಾ; ಪಾಪಿ ಆಂಗಾಕ್ ಅನಿ ರಗ್ತಾಕ್ ದೆವಾಚ್ಯಾ ರಾಜಾತ್ ವಾಟೊ ರ್‍ಹಾಯ್ನಾ; ನಾಹೊಲ್ಯಾರ್ ನಾಸ್ ಹೊವ್ನ್ ಜಾತಲ್ಯಾನ್, ನಾಸ್ ಹೊವ್ನ್ ಜಾಯ್‌ನಸ್ತಾನಾ ರ್‍ಹಾತಲ್ಯಾತ್ ವಾಟೊ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:50
18 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.


“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.


ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.


ಸ್ವಲ್ಪವಾಗಿ ಬಿತ್ತುವವನು ಸ್ವಲ್ಪವಾಗಿ ಕೊಯ್ಯುವನು, ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂಬ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ


ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.


ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು