Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:51 - ಕನ್ನಡ ಸಮಕಾಲಿಕ ಅನುವಾದ

51 ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51-52 ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಅತ್ತಾ ಎಕ್ ಘುಟ್ ಮಿಯಾ ತುಮ್ಕಾ ಸಾಂಗ್ತಾ; ಅಮಿ ಸಗ್ಳೆ ಜಾನಾ ಮರಿನಾವ್, ಖರೆ ಅಮ್ಚೆ ಸಗ್ಳ್ಯಾಂಚೆ ರುಪ್ ಬದಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:51
13 ತಿಳಿವುಗಳ ಹೋಲಿಕೆ  

ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.


ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.


ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.


ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.


ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ.


ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು