Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:13 - ಕನ್ನಡ ಸಮಕಾಲಿಕ ಅನುವಾದ

13 ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಉಶಾರ್ ರಾವಾ, ವಿಶ್ವಾಸಾತ್ ಘಟ್ ರ್‍ಹಾವಾ, ಧೈರ್ಯಾನ್ ರ್‍ಹಾವಾ, ಘಟ್ ಹೊವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:13
53 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.


ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.


ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.


ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.


ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.


ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು.


“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.


ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು