Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆ ಕೊನಾಕ್ಡೆ ಆತ್ಮೊ ನಾ ತೆನಿ ದೆವಾಚ್ಯಾ ಆತ್ಮ್ಯಾಕ್ನಾ ಯೆತಲಿ ಆಯಾರಾ ಘೆವ್ನ್ ಹೊಯ್ನಾ. ಅಸ್ಲ್ಯಾ ಲೊಕಾನ್ಕಿ ಖರೆಬಿ ತೆ ಅರ್ಥ್ ಹೊಯ್ನಾ, ತಿ ತೆಂಕಾ ಪಿಸೆಪಾನ್ ಸರ್ಕೆ ದಿಸಾತ್, ಕಶ್ಯಾಕ್ ಮಟ್ಲ್ಯಾರ್, ತೆಚಿ ಕಿಮ್ಮತ್ ಖಾಲಿ ಆತ್ಮಿಕ್ ಆದಾರಾಚ್ಯಾ ವೈನಾ ನ್ಯಾಯ್ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:14
36 ತಿಳಿವುಗಳ ಹೋಲಿಕೆ  

ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು.


ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.


ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.


ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.


ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.


ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು