Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:7 - ಕನ್ನಡ ಸಮಕಾಲಿಕ ಅನುವಾದ

7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಿಯಾ ಪರ್‍ಚಾರ್ ಕರ್‍ತಲೆ ಹೆ ಶಾನ್‍ಪಾನ್ ದೆವಾಚೆ ಅನಿ ಗುಟಾನ್ ಥವಲ್ಲೆ, ತೆನಿ ಹ್ಯೊ ಜಗ್ ಕರುಚ್ಯಾ ಅದ್ದಿಚ್ ಅಮ್ಚ್ಯಾ ಮಹಿಮೆಸಾಟ್ನಿ ಅದ್ದಿಚ್‍ ಎಚುನ್ ಕಾಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:7
21 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು