1 ಕೊರಿಂಥದವರಿಗೆ 2:9 - ಕನ್ನಡ ಸಮಕಾಲಿಕ ಅನುವಾದ9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆಚೆಸಾಟ್ನಿ ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಸಾರ್ಕೆ, “ಡೊಳ್ಯಾನಿ ಬಗುಕ್‍ನ್ಯಾತ್, ಕಾನಾನಿ ಆಯ್ಕುಕನಾತ್, ಅನಿ ಮಾನ್ಸಾಚ್ಯಾ ಮನಾತ್ ಕಾಯ್ಬಿ ಗುಸುಕ್ ನಾ, ಸಗ್ಳೆ ದೆವಾನ್ ತಯಾರ್ ಕರುನ್ ಥವಲ್ಲೆ ಹಾಯ್ ಮನುನ್ ಅಪ್ನಾಚೊ ಪ್ರೆಮ್ ಕರ್‍ತಲ್ಯಾಂಚ್ಯಾಸಾಟಿ.” ಅಧ್ಯಾಯವನ್ನು ನೋಡಿ |