Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:13 - ಕನ್ನಡ ಸಮಕಾಲಿಕ ಅನುವಾದ

13 ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹರಿ ಎಕ್ಲ್ಯಾಚೆ ಕಾಮ್ ದಾಕ್ವುನ್ ದಿವ್ನ್ ಹೊತಾ, ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚೊ ದಿಸ್ ತಿ ಕಾಮಾ ಉಜ್ವೊಡಾಕ್ ಹಾನ್ತಾ. ತೊ ದಿಸ್ ಆಗಿಚೊ ದಿಸ್ ಅನಿ ತಿ ಆಗ್ ಹರಿಎಕ್ ಮಾನ್ಸಾಚ್ಯಾ ಕಾಮಾ ದಾಕ್ವುನ್ ದಿತಾ ಅನಿ ತ್ಯಾ ಆಗಿನ್ ಪರಿಕ್ಷಾ ಕರುನ್ ಹೊತಾ ಅನಿ ತೆ ಕಾಮಾಚೆ ಬರೆಪಾನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:13
28 ತಿಳಿವುಗಳ ಹೋಲಿಕೆ  

ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.


ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು