Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:12 - ಕನ್ನಡ ಸಮಕಾಲಿಕ ಅನುವಾದ

12 ಸ್ವಂತ ಕೈಯಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸಿಕೊಂಡು ಆಶೀರ್ವದಿಸುತ್ತೇವೆ, ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನೆಯಿಲ್ಲದವರೂ ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಬೈಸಿಕೊಂಡು ಹರಸುತ್ತೇವೆ; ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ; ಅಪಕೀರ್ತಿಹೊಂದಿ ಆದರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಾಮ್ ಕರುನ್ ಅಮ್ಚ್ಯಾ ಸ್ವತಾಚಿ ಪೊಟಾ ಭರುನ್ ಘೆತಾಂವ್. ಅಮ್ಚ್ಯಾ ವೈರ್ ಸರಾಪ್ ಮಾಗ್ತಲ್ಯಾಕ್ನಿ ಬರೆ ಮಾಗುನ್ ಆಶಿರ್ವಾದ್ ದಿತಾಂವ್, ಅಮ್ಕಾ ಗಾವ್ತಲೊ ತರಾಸ್ ಖುಶಿನ್ ಸೊಸ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:12
23 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನಿಮ್ಮನ್ನು ಹಿಂಸಿಸುವರನ್ನು ಆಶೀರ್ವದಿಸಿರಿ, ಶಪಿಸಬೇಡಿರಿ.


“ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, ಅವನು ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.”


ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?


ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.


ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.


ನಿಮ್ಮ ಸೇವೆಯನ್ನು ಮಾಡುವುದಕ್ಕಾಗಿ ನಾನು ಬೇರೆ ಸಭೆಗಳಿಂದ ಸಹಾಯವನ್ನು ಹೊಂದಿ, ಅವರಿಂದ ವಸೂಲಿ ಮಾಡುತ್ತಿದ್ದೆ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು