Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:19 - ಕನ್ನಡ ಸಮಕಾಲಿಕ ಅನುವಾದ

19 ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನಲ್ಲ ಅವರ ಶಕ್ತಿಯನ್ನೇ ಗೊತ್ತುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಮಿಯಾ ತುಮ್ಚ್ಯಾಕ್ಡೆ ಯೆತಾ ಅನಿ ದೆವಾಚಿ ಖುಶಿ ರ್‍ಹಾಲ್ಯಾರ್ ಲಗ್ಗುನಾಚ್ ಯೆತಾ; ತನ್ನಾ ತೊಂಡಾನ್ ಮೊಟೆ ಬೊಲ್ತಲ್ಯಾಂಚ್ಯಾ ಹಾತಾನ್ ಕಾಯ್ ಕಾಯ್ ಕರುಕ್ ಹೊತಾ ಮನುನ್ ಬಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:19
18 ತಿಳಿವುಗಳ ಹೋಲಿಕೆ  

ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.


ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.


ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.


ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.


ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.


ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.


ನನ್ನ ಪತ್ರಗಳಿಂದ ನಾನು ನಿಮಗೆ ಭಯ ಹುಟ್ಟಿಸಲು ಪ್ರಯತ್ನಿಸುವುದಕ್ಕೆ ನನಗೆ ಮನಸ್ಸಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು