Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:21 - ಕನ್ನಡ ಸಮಕಾಲಿಕ ಅನುವಾದ

21 ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತರ್ ತುಮ್ಕಾ ಖಲೆ ಪಾಜೆ? ಮಿಯಾ ತುಮ್ಚ್ಯಾಕ್ಡೆ ಬೆತ್ತಾಚಿ ಖಾಟಿ ಘೆವ್ನ್ ಯೆವ್ಚೆ ಕಾಯ್? ಪ್ರೆಮಾನ್ ಅನಿ ಥಂಡ್ ಮನಾನ್ ಯೆವ್ಚೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:21
16 ತಿಳಿವುಗಳ ಹೋಲಿಕೆ  

ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಗತಕಾಲದಲ್ಲಿ ಪಾಪ ಮಾಡುತ್ತಿದ್ದವರನ್ನು ಎಚ್ಚರಿಸಿದೆನು. ನಾನು ತಿರುಗಿ ಬಂದರೆ, ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದುಕೊಂಡು ಹೇಳುತ್ತಿದ್ದೇನೆ.


ಅದರ ಬದಲಾಗಿ, ನಾವು ನಿಮ್ಮ ನಡುವೆ ಶಿಶುಗಳಂತೆ ಇದ್ದೆವು. ತಾಯಿಯು ತನ್ನ ಮಕ್ಕಳನ್ನು ಪೋಷಿಸುವಂತೆ,


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.


ಆದ್ದರಿಂದ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು ನಿಮಗೆ ವೇದನೆಯನ್ನು ಉಂಟುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆನು.


ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ.


ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ.


ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.


ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ.


ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?


ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು