1 ಕೊರಿಂಥದವರಿಗೆ 5:12 - ಕನ್ನಡ ಸಮಕಾಲಿಕ ಅನುವಾದ12 ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೊರಗಿನವರನ್ನು ಕುರಿತು ತೀರ್ಪುಮಾಡುವದಕ್ಕೆ ನನಗೇನಧಿಕಾರ? ಒಳಗಿನವರನ್ನು ಕುರಿತು ತೀರ್ಪುಮಾಡುವವರು ನೀವು ಅಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12-13 ಸಭೆಗೆ ಸೇರಿಲ್ಲದ ಜನರಿಗೆ ತೀರ್ಪು ಮಾಡುವುದು ನನ್ನ ಕೆಲಸವಲ್ಲ. ಅವರಿಗೆ ದೇವರೇ ತೀರ್ಪು ಮಾಡುವನು. ಆದರೆ ಸಭೆಗೆ ಸೇರಿರುವ ಜನರಿಗೆ ನೀವು ತೀರ್ಪು ಮಾಡಬೇಕು. “ದುಷ್ಟನನ್ನು ಸಭೆಯಿಂದ ಹೊರಗೆ ಹಾಕಿ” ಎಂದು ಪವಿತ್ರ ಗ್ರಂಥ ಹೇಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಭಾಯ್ರ್ ಹೊತ್ತ್ಯಾಂಚಿ ಝಡ್ತಿ ಕರುಕ್ ಮಿಯಾ ಕೊನ್? ತುಮಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಅಸಲ್ಲ್ಯಾಂಚಿ ಝಡ್ತಿ ಕರುಚೆ ನ್ಹಯ್? ಅಧ್ಯಾಯವನ್ನು ನೋಡಿ |