Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:7 - ಕನ್ನಡ ಸಮಕಾಲಿಕ ಅನುವಾದ

7 ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೆ ಹುಳಿಯನ್ನು ತೆಗೆದುಹಾಕಿ ಹೊಸ ಕಣಿಕದಂತಾಗಿರ್ರಿ. ಯಾಕಂದರೆ ನಮ್ಮ ಪಸ್ಕದ ಯಜ್ಞದ ಕುರಿಯು ಕೊಯಿದದೆ; ಅದಾವದಂದರೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚೆಸಾಟ್ನಿ ಜುನ್ನೊ ಪಾಪಾಚೊ ಸೊಡೊ ಕಾಡುನ್ ಟಾಕಾ, ಅನಿ ತುಮಿ ಸಗ್ಳ್ಯಾ ರಿತಿನ್ ನಿತಳ್ ಹೊವಾ, ತನ್ನಾ ತುಮಿ ಕಸ್ಲೊಬಿ ಸೊಡೊ ನಸಲ್ಲೆ ಪಿಟ್ಟ್ ಹೊತ್ಯಾಸಿ, ಕಶ್ಯಾಕ್ ಮಟ್ಲ್ಯಾರ್ ಅಮ್ಚೆ ಪಾಸ್ಕಾಚೆ ಜೆವಾನ್ ತಯಾರ್ ಹಾಯ್, ಕ್ರಿಸ್ತಾಕ್ ಅಮ್ಚ್ಯಾ ಪಾಸ್ಕಾಚ್ಯಾ ಬೊಕ್ಡಾಚಿ ಬಲಿ ಭೆಟ್ವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:7
19 ತಿಳಿವುಗಳ ಹೋಲಿಕೆ  

ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.


ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು