1 ಕೊರಿಂಥದವರಿಗೆ 6:11 - ಕನ್ನಡ ಸಮಕಾಲಿಕ ಅನುವಾದ11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತುಮ್ಚ್ಯಾತ್ಲೆ ಉಲ್ಲೆ ಎಕ್ ಕಾಲಾತ್ ತಸೆಚ್ ಹೊತ್ತೆ; ಖರೆ ಅತ್ತಾ ತುಮ್ಕಾ ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ನಾಂವಾನ್ ಅನಿ ದೆವಾಚ್ಯಾ ಆತ್ಮ್ಯಾನ್ ಧುವ್ನ್ ಪವಿತ್ರ್ ಕರಲ್ಲೆ ಹಾಯ್, ಅಶೆ ಪವಿತ್ರ್ ಅನಿ ನಿತಿವಂತ್ ಲೊಕಾ ಕರಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.