Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:19 - ಕನ್ನಡ ಸಮಕಾಲಿಕ ಅನುವಾದ

19 ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮ್ಚಿ ಆಂಗಾ ಪವಿತ್ರ್ ಆತ್ಮ್ಯಾಚಿ ಗುಡಿಯಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತೊಚ್ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರ್‍ತಾ ಹೊಯ್ ಕಾಯ್ ನಾ? ದೆವಾನುಚ್ ತೆಕಾ ತುಮ್ಕಾ ದಿಲ್ಯಾನಾಯ್, ತುಮಿ ತುಮ್ಚಿಚ್ ಆಸ್ತಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:19
17 ತಿಳಿವುಗಳ ಹೋಲಿಕೆ  

ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.


ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?”


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?


“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು