Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:2 - ಕನ್ನಡ ಸಮಕಾಲಿಕ ಅನುವಾದ

2 ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚಿ ಲೊಕಾ ಜಗಾಚಿ ಝಡ್ತಿ ಕರ್ತಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮಿ ಜರ್ ಹ್ಯಾ ಜಗಾಚಿ ಝಡ್ತಿ ಕರ್‍ತಲೆ ತರ್ ಹ್ಯಾ ಚಿಲ್ಲರ್ ವಿಶಯಾಂಚೆ ನಿರ್ನಯ್ ಕರುಕ್ ತುಮ್ಚ್ಯಾನ್ ಹೊಯ್ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:2
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.


ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ?


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು