Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:10 - ಕನ್ನಡ ಸಮಕಾಲಿಕ ಅನುವಾದ

10 ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ವಿವಾಹಿತರಿಗೆ ನನ್ನದೊಂದು ಆಜ್ಞೆ: ನಿಜಕ್ಕೂ ಇದು ನನ್ನದಲ್ಲ, ಪ್ರಭುವಿನ ಆಜ್ಞೆ. ಸತಿಯು ತನ್ನ ಪತಿಯನ್ನು ಬಿಟ್ಟಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮದುವೆಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆಯು ಏನಂದರೆ - ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮದುವೆಯಾಗಿರುವವರಿಗೆ ನಾನು ಈ ಆಜ್ಞೆಯನ್ನು ಕೊಡುತ್ತೇನೆ. (ಈ ಆಜ್ಞೆಯು ನನ್ನದಲ್ಲ. ಪ್ರಭುವಿನದು.) ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಲಗಿನ್ ಹೊಲ್ಲ್ಯಾಕ್ನಿ ಮಾಜೊ ಹುಕುಮ್ ಅಸೊ, ಹ್ಯೊ ಹುಕುಮ್ ಖರೆ ಮಟ್ಲ್ಯಾರ್ ಮಾಜೊ ನ್ಹಯ್ ಧನಿಯಾಚೊ, ಬಾಯ್ಕೊನ್ ಅಪ್ನಾಚ್ಯಾ ಘೊವಾಕ್ ಸೊಡುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:10
13 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.


“ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”


ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.


ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.


ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.


ಹೀಗೆ ನಾನು ಹೇಳುವುದು ಸಲಹೆಯೇ ಹೊರತು ಆಜ್ಞೆಯಲ್ಲ.


ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.


ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.


ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು