Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:17 - ಕನ್ನಡ ಸಮಕಾಲಿಕ ಅನುವಾದ

17 ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹರಿ ಎಕ್ಲೊ ದೆವಾನ್ ತುಮ್ಕಾ ದಿಲ್ಲ್ಯಾ ದೆನ್ಗಿತ್ ಮಟ್ಲ್ಯಾರ್ ದೆವಾನ್ ತೆಕಾ ಬಲ್ವಲ್ಲ್ಯಾ ತನ್ನಾ ಕಸೊ ಹಾಯ್ ತ್ಯಾಚ್ ಸ್ಥಿತಿತ್ ಜಿವನ್ ಕರುಕ್ ಬಗುಂದಿತ್, ಹಿಚ್ ಚಾಲ್ ಮಿಯಾ ಸಗ್ಳ್ಯಾ ದೆವಾಚ್ಯಾ ತಾಂಡ್ಯಾಕ್ನಿ ಶಿಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:17
18 ತಿಳಿವುಗಳ ಹೋಲಿಕೆ  

ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.


ಪ್ರಿಯರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ನೆಲೆಸಿರಲಿ.


ಅವನೊಂದಿಗೆ ಇನ್ನೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇನೆ. ಆ ಸಹೋದರನು ಮಾಡಿದ ಸುವಾರ್ತೆ ಸೇವೆಯನ್ನು ಎಲ್ಲಾ ಸಭೆಗಳವರು ಪ್ರಶಂಶಿಸಿದ್ದಾರೆ.


ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ.


ಸುನ್ನತಿ ಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿಯಿಲ್ಲದವನಂತೆ ಇರಬಾರದು. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿ ಮಾಡಿಸಿಕೊಳ್ಳಬೇಕಾಗಿಲ್ಲ.


ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.


ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.


ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.


ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು