Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜಾಲ್ಯಾರ್ಬಿ ಅನೈತಿಕ್ ಅಪಾಯ್ ಕವ್ಡೊ ಹಾಯ್ ಕಿ ಮಟ್ಲ್ಯಾರ್, ಹರಿ ಎಕ್ ಘೊಮನ್ಸಾಕ್ ಅಪ್ನಾಚಿಚ್ ಮನ್ತಲಿ ಬಾಯ್ಕೊ ರಾಂವ್ದಿತ್ ಅನಿ ಹರಿ ಎಕ್ ಬಾಯ್ಕೊಮನ್ಸಿಕ್ ಅಪ್ನಾಚೊಚ್ ಮನ್ತಲೊ ಘೊ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:2
14 ತಿಳಿವುಗಳ ಹೋಲಿಕೆ  

ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.


ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.


ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.


ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.


ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.


ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.


ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.


ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”


ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ.


ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.


ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು