Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:28 - ಕನ್ನಡ ಸಮಕಾಲಿಕ ಅನುವಾದ

28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜಾಲ್ಯಾರ್ಬಿ ತಿಯಾ ಲಗಿನ್ ಕರುನ್ ಘೆತಲ್ಯಾತ್ ಕಾಯ್ ಪಾಪ್ ನಾ; ಖರೆ ಲಗಿನ್ ಹೊಲ್ಲ್ಯಾಕ್ನಿ ಹ್ಯಾ ಬಾಳ್ವಿಚೆ ಸದ್ದಿಚೆ ಕಸ್ಟ್ ಹಾತ್. ತೆ ಕಸ್ಟ್ ತುಮ್ಕಾ ಗಾವ್ತಲೆ ನಕ್ಕೊ ಮನ್ತಲಿ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:28
7 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಇಂದಿನ ಕಷ್ಟಕಾಲದ ಪರಿಸ್ಥಿತಿಯಲ್ಲಿ ನೀವು ಇದ್ದ ಹಾಗೇ ಇರುವುದು ನಿಮಗೆ ಒಳ್ಳೆಯದೆಂದು ನಾನು ಭಾವಿಸುತ್ತೇನೆ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.


ನಿನಗೆ ಹೆಂಡತಿಯಿದ್ದರೆ? ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಹೆಂಡತಿಯಿಂದ ಬಿಡುಗಡೆಯಾಗಿದ್ದರೆ? ಹೆಂಡತಿಗಾಗಿ ಹುಡುಕಬೇಡ.


ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು