Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:33 - ಕನ್ನಡ ಸಮಕಾಲಿಕ ಅನುವಾದ

33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ನಗಿನ್ ಹೊಲ್ಲ್ಯಾ ಘೊವ್ಮಾನ್ಸಾಕ್ ಸಂಸಾರಾಚ್ಯಾ ಸಂಗ್ತಿಯಾಂಚೊ ಉಸ್ಕೊ ಅಪ್ನಾಚ್ಯಾ ಬಾಯ್ಕೊಚ್ಯಾ ಮನಾಕ್ ಯೆಯ್ ಸಾರ್ಕೊ ಮಿಯಾ ಕಶೆ ಹೊತಲೆ ಮನುನ್ ತೊ ಚಿಂತಾ, ಅಶೆ ಅಪ್ನಾಚ್ಯಾ ಭುತ್ತುರುಚ್ ತೆಕಾ ದೊನಿಬಿ ಬಾಜುನ್ ವೊಡಲ್ಲ್ಯಾ ಸಾರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:33
13 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.


ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.


ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ.


ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.


“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.


ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.


ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು