Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:5 - ಕನ್ನಡ ಸಮಕಾಲಿಕ ಅನುವಾದ

5 ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹಿ ಹಕ್ಕಾ ಎಕಾಮೆಕಾಕ್ ನಾ ಮನುನಕಾಶಿ, ತಶೆ ಕರ್‍ತಲೆ ರ್‍ಹಾಲ್ಯಾರ್ ದೊಗಾಂಚಿಬಿ ಕಬುಲಿ ರ್‍ಹಾವ್ಕ್ ಪಾಜೆ; ತೆಬಿ ಮಾಗ್ನಿ ಕರುಸಾಟ್ನಿ ಉಲ್ಲೊಸೊ ಎಳ್ ತವ್ಡೆಚ್ ಮಾನಾ ಅನಿಪರ್ತುನ್ ತುಮಿ ಎಕ್ ಹೊವ್ಚೆ, ನಾ ಹೊಲ್ಯಾರ್ ತುಮ್ಚೆ ಸ್ವನಿಯಂತ್ರನ್ ಕಮಿ ಹೊಯ್ಲ್ ಅನಿ ಸೈತಾನ್ ತುಮ್ಕಾ ನಾಡಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:5
11 ತಿಳಿವುಗಳ ಹೋಲಿಕೆ  

ಅವನು ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ, ನೀವು ಲೈಂಗಿಕ ಸಂಬಂಧದಿಂದ ದೂರವಾಗಿರಿ,” ಎಂದನು.


ಜನರನ್ನು ಕೂಡಿಸಿರಿ; ಸಭೆಯನ್ನು ಪವಿತ್ರಗೊಳಿಸಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳಗಿಂದಲೂ ಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.


ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು.


ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.


ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು