Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:1 - ಕನ್ನಡ ಸಮಕಾಲಿಕ ಅನುವಾದ

1 ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅನಿ ಅತ್ತಾ ಮುರ್ತಿಯಾಕ್ನಿ ಭೆಟ್ವಲ್ಲ್ಯಾ ಖಾನ್ಯಾಚ್ಯಾ ವಿಶಯಾತ್ ತುಮಿ ಸಾಂಗ್ತ್ಯಾಶಿ ತಸೆಚ್ ಅಮ್ಕಾ ಸಗ್ಳೆ ಶಾನ್‍ಪಾನ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್ ಖರೆ ಶಾನ್‍ಪಾನ್ ಅಮ್ಕಾ ಹಂಕಾರಿ ಕರ್‍ತಾ, ಪ್ರೆಮ್ ಎವ್ಡೊಚ್ ಅಮ್ಕಾ ವಾಡಾವಳ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:1
35 ತಿಳಿವುಗಳ ಹೋಲಿಕೆ  

ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.


ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.


ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.


ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.


ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.


ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.


ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.


ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ?


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?


ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ.


ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!


ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.


ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.


ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು