1 ಕೊರಿಂಥದವರಿಗೆ 9:15 - ಕನ್ನಡ ಸಮಕಾಲಿಕ ಅನುವಾದ15 ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ಮಿಯಾ ಅಸ್ಲ್ಯಾ ಖಲ್ಯಾಬಿ ಹಕ್ಕಾಂಚೊ ಅಧಿಕಾರ್ ವಾಪ್ರುಕ್ ನಾ ಅನಿ ಅತ್ತಾ ತಿ ಹಕ್ಕಾ ಮಾಕಾ ಗಾವ್ಕ್ ಪಾಜೆ ಮನುನ್‌ಬಿ ಮಿಯಾ ತುಮ್ಕಾ ಲಿವಿನಾ ಹೊಲಾ, ತಸೆ ಕರ್‍ತಲ್ಯಾಚ್ಯಾನ್ಕಿ ಮಿಯಾ ಮರಲ್ಲೆ ಬರೆ; ಮಾಜೆ ಮೊಟೆಪಾನ್ ಕೊನಾಚ್ಯಾಬಿ ಪಾಯ್ದ್ಯಾಕ್ ಪಡಿನಸಲ್ಲೆ ಸಾರ್ಕೆ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |