Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೂದ್ಯರನ್ನು ಗಳಿಸಿಕೊಳ್ಳಲು ಯೆಹೂದ್ಯರಿಗೆ ಯೆಹೂದ್ಯನಂತಾದೆ. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಗಳಿಸಿಕೊಳ್ಳಲು ನಾನು ಆ ಶಾಸ್ತ್ರಕ್ಕೆ ಅಧೀನನಲ್ಲದಿದ್ದರೂ ಅವರಿಗೋಸ್ಕರ ಅಧೀನನಂತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಗಳಿಗೆ ಅಧೀನನಲ್ಲದವನಾದರೂ ನಿಯಮಗಳಿಗೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮಗಳಿಗೆ ಅಧೀನನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜುದೆವಾಕ್ನಿ ಕಮ್ವುನ್ ಘೆವ್‍ಸಾಟ್ನಿ ಜುದೆವಾಂಚ್ಯಾ ಮದ್ದಿ ಮಿಯಾ ಜುದೆವ್ ಹೊಲೊ; ಖಾಯ್ದ್ಯಾಂಚ್ಯಾ ಖಾಯ್ಲೆ ಹೊತ್ತ್ಯಾಕ್ನಿ ಕಮ್ವುನ್ ಘೆವ್‍ಸಾಟ್ನಿ ಖಾಯ್ದ್ಯಾಂಚ್ಯಾ ಖಾಯ್ಲೆ ನತ್ತೊ ಸಾರ್ಕೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:20
11 ತಿಳಿವುಗಳ ಹೋಲಿಕೆ  

ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.


ಆದರೆ ನೀವು ದೇವರ ಆತ್ಮದಿಂದ ನಡೆಸಿಕೊಳ್ಳುವವರಾದರೆ, ನಿಯಮದ ಅಧೀನತೆಯಲ್ಲಿ ಇರುವವರಲ್ಲ.


ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.


ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.


ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು