Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:26 - ಕನ್ನಡ ಸಮಕಾಲಿಕ ಅನುವಾದ

26 ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದಿರುವ ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದವನಾಗಿ ಗುದ್ದಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಗುರಿಯನ್ನು ಹೊಂದಿರುವ ವ್ಯಕ್ತಿಯಂತೆ ಓಡುತ್ತೇನೆ. ಕೇವಲ ಗಾಳಿಯನ್ನು ಗುದ್ದದೆ, ನಿಜವಾಗಿಯೂ ಗುದ್ದಿ ಮುಷ್ಠಿಕಾಳಗ ಮಾಡುವ ವ್ಯಕ್ತಿಯಂತೆ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆ ಮನುನುಚ್ ಮಿಯಾ ಎಕ್ ಗುರಿ ನಸಲ್ಯಾಚ್ಯಾ ಸಾರ್ಕೆ ಪಳಿನಾ; ವಾರ್‍ಯಾರ್ ಮುಟ್ಕೆ ಮಾರ್‍ತಲ್ಯಾ ಬಾಸೆನ್ ಮಿಯಾ ಕುಸ್ತಿ ಖೆಳಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:26
17 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ.


ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಅದರಂತೆಯೇ, ನೀವೂ ಸ್ಪಷ್ಟವಾದ ಭಾಷೆಯಿಂದ ಮಾತನಾಡದೆ ಹೋದರೆ, ಮಾತನಾಡಿದ್ದು ಏನೆಂದು ತಿಳಿಯುವುದು ಹೇಗೆ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು