Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:3 - ಕನ್ನಡ ಸಮಕಾಲಿಕ ಅನುವಾದ

3 ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನನ್ನು ವಿಚಾರಿಸುವವರಿಗೆ ಇದೇ ನನ್ನ ಉತ್ತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಜನರು ನಮ್ಮನ್ನು ವಿಚಾರಣೆ ಮಾಡಲು ಬಯಸುತ್ತಾರೆ. ನಾನು ಅವರಿಗೆ ಕೊಡುವ ಉತ್ತರ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜಿ ಇಚಾರ್ನಿ ಕರ್ತಲ್ಯಾಕ್ನಿ ಮಾಜಿ ಜವಾಬ್ ಅಸೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:3
14 ತಿಳಿವುಗಳ ಹೋಲಿಕೆ  

ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.


ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.


“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.


“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ.


ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು