Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:7 - ಕನ್ನಡ ಸಮಕಾಲಿಕ ಅನುವಾದ

7 ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೆ ಇರುವದುಂಟೋ? ಪಶುಗಳನ್ನು ಸಾಕಿದವನು ಅವುಗಳ ಹೈನಿನಿಂದ ಜೀವಿಸದೆ ಇರುವದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಪ್ನಾಚ್ಯಾಚ್ ಖರ್ಚಾರ್ ಸೆವಾ ಕರ್‍ತಲೊ ಸೈನಿಕ್ ಕೊನ್ ತೊ? ಎಕ್ ದ್ರಾಕ್ಷಿಚೊ ಮಳೊ ಲಾವ್ನ್ ತೆಚಿ ಫಳಾ ಖಾಯ್‌ನಸ್ತಾನಾ ರ್‍ಹಾಲ್ಲೊ ಕೊನ್ ತೊ? ಅಪ್ನಾಚ್ಯಾ ಸ್ವತಾಚ್ಯಾ ಬಕ್ರ್ಯಾಚೆ ದುದ್ ತೆಂಚೊ ಕುರ್ಬುರ್ ವಾಪ್ರಿನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:7
16 ತಿಳಿವುಗಳ ಹೋಲಿಕೆ  

ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.


ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.


ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.


ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು