Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವು ಕೇವಲ ಲೋಕರೂಢಿಯ ಮಾತುಗಳಲ್ಲ. ಧರ್ಮಶಾಸ್ತ್ರವೂ ಇದನ್ನು ಅನುಮೋದಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇವುಗಳು ಕೇವಲ ಮಾನುಷ ಉದಾಹರಣೆಗಳಲ್ಲ. ದೇವರ ಧರ್ಮಶಾಸ್ತ್ರವೂ ಈ ಸಂಗತಿಗಳನ್ನು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಿಯಾ ಹೆ ಮಾನ್ಸಾಚ್ಯಾ ಚಾಲಿ ಪರ್‍ಕಾರ್ ಬೊಲುಕ್ ಲಾಗ್ಲಾ ಕಾಯ್? ಮೊಯ್ಜೆಚೊ ಖಾಯ್ದೊಬಿ ಹೆಚ್ ಸಾಂಗ್ತಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:8
9 ತಿಳಿವುಗಳ ಹೋಲಿಕೆ  

ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು