Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:4 - ಕನ್ನಡ ಸಮಕಾಲಿಕ ಅನುವಾದ

4 ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಚಿಂತುನ್ ಘೆತಲಿ ಅನಿ ತುಮ್ಚ್ಯಾ ಪುರ್ವಜಾಂಚಿ ನಾವಾ ಹೊತ್ತಿ ಪಟ್ಟಿ ಹೆ ಸಗ್ಳೆ ಪಾಯ್ದ್ಯಾಕ್ ಪಡಿ ನಸಲ್ಲೊ ವಾದ್-ವಿವಾದ್ ಉಟಿ ಸಾರ್ಕೆ ಕರ್‍ತಾ. ತೆನಿ ವಿಶ್ವಾಸಾ ವರ್‍ತಿ ಠೆಕುನ್ ಹೊತ್ತ್ಯಾ ದೆವಾಚ್ಯಾ ಯವ್ಜನಿ ಸರ್ಕೆ ಕರಿನಾ ಹೊಲ್ಯಾತ್.ಮನುನ್ ತೆಂಕಾ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:4
19 ತಿಳಿವುಗಳ ಹೋಲಿಕೆ  

ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.


ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.


ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನಿಮಗೋಸ್ಕರವಾಗಿ ನನಗೆ ಕೊಡಲಾದ ದೇವರ ಕೃಪೆಯ ಕಾರ್ಯಭಾರವನ್ನು ನೀವು ಕೇಳಿದ್ದೀರಿ,


ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು