1 ತಿಮೊಥೆಯನಿಗೆ 3:16 - ಕನ್ನಡ ಸಮಕಾಲಿಕ ಅನುವಾದ16 ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”. ಅಧ್ಯಾಯವನ್ನು ನೋಡಿ |