Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:4 - ಕನ್ನಡ ಸಮಕಾಲಿಕ ಅನುವಾದ

4 ಪೂರ್ಣ ಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ಕುಟುಂಬವನ್ನು ಜವಾಬ್ದಾರಿಯುತವಾಗಿ ನಡೆಸುವವನೂ ಮಕ್ಕಳನ್ನು ಶಿಸ್ತಿನಲ್ಲಿ ಬೆಳೆಸಿ ಅವರಿಂದ ಗೌರವವನ್ನು ಪಡೆದುಕೊಳ್ಳುವವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಪ್ನಾಚೆ ಘರ್-ದಾರ್ ಬರೆ ಕರುನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಅಪ್ನಾಚಿ ಪೊರಾ ಅಪ್ನಾಕ್ ಮಾನ್ ದಿವ್ನ್ ಚಲಿ ಸರ್ಕೆ ಸಂಬಾಳುನ್ ಘೆವ್ನ್ ಚಲ್ತಲೊ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:4
10 ತಿಳಿವುಗಳ ಹೋಲಿಕೆ  

ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.


ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.


ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು