Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:5 - ಕನ್ನಡ ಸಮಕಾಲಿಕ ಅನುವಾದ

5 ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ, ದೇವರ ವಾಕ್ಯದಿಂದಲೂ ನಮ್ಮ ಪ್ರಾರ್ಥನೆಯಿಂದಲೂ ಅದು ಪಾವನಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರ ವಾಕ್ಯವನ್ನು ಹೇಳಿ ಪ್ರಾರ್ಥಿಸುವದರಿಂದ ಅದು ಪವಿತ್ರವಾಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಕೆಂದರೆ ದೇವರ ವಾಕ್ಯದಿಂದ ಮತ್ತು ಪ್ರಾರ್ಥನೆಯಿಂದ ಅದು ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಗೊಸ್ಟಿಯಾ ಅನಿ ಮಾಗ್ನಿ ವೈನಾ ತೆ ಪವಿತ್ರ್ ಹೊವ್ನ್ ದೆವಾಕ್ ಸ್ವಿಕಾರ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:5
8 ತಿಳಿವುಗಳ ಹೋಲಿಕೆ  

ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು