Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:19 - ಕನ್ನಡ ಸಮಕಾಲಿಕ ಅನುವಾದ

19 ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಎಕ್ ವಡಿಲ್ ಮಾನ್ಸಾ ವರ್‍ತಿ ಘಾಟಲ್ಲೊ ಅಪ್ವಾದ್ ದೊಗಾನಿ ನಾ ಹೊಲ್ಯಾರ್ ತಿಗಾನಿ ಸಾಂಗ್ಲ್ಯಾ ಸಿವಾಯ್ ಒಪ್ಪುನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:19
14 ತಿಳಿವುಗಳ ಹೋಲಿಕೆ  

ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’


ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.


ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.


ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.


ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.


“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.


‘ಇಬ್ಬರ ಸಾಕ್ಷಿಯು ಸತ್ಯವಾದದ್ದು’ ಎಂದು ನಿಮ್ಮ ನಿಯಮದಲ್ಲಿಯೇ ಬರೆದಿದೆ.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಆಗ ಪಿಲಾತನೇ ಹೊರಗೆ ಅವರ ಬಳಿಗೆ ಬಂದು, “ನೀವು ಈತನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು