1 ತಿಮೊಥೆಯನಿಗೆ 6:12 - ಕನ್ನಡ ಸಮಕಾಲಿಕ ಅನುವಾದ12 ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ವಿಶ್ವಾಸಾಚ್ಯಾ ಖೆಳಾತ್ ತುಜ್ಯಾ ಸಗ್ಳ್ಯಾ ಬರೆಪಾನಾನ್ ಪಳ್, ಅನಿ ತುಕಾಚ್ ತಿಯಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಜಿಕುನ್ ಘೆ; ಹೆಚ್ಯಾಸಾಟಿಚ್ ತುಕಾ ದೆವಾನ್ ಬಲ್ವುಲ್ಯಾನ್, ಲೈ ಸಾಕ್ಷಿಯಾಂಚ್ಯಾ ಫಿಡ್ಯಾತ್ ತಿಯಾ ಹೆ ಲೈ ಬರೆಪಾನ್ ಸ್ವಿಕಾರ್ ಕರಲ್ಲೆ ಹಾಯ್. ಅಧ್ಯಾಯವನ್ನು ನೋಡಿ |