Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:14 - ಕನ್ನಡ ಸಮಕಾಲಿಕ ಅನುವಾದ

14 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ನೀನು ಸುವಾರ್ತೆಯ ವಿಧಿಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಕಾ ದಿಲ್ಲಿ ಹುಕುಮಾ ಅಮ್ಚೊ ಧನಿ ಜೆಜು ಕ್ರಿಸ್ತ್ ದಿಸ್ತಲ್ಲ್ಯಾ ದಿಸಾ ಪತರ್ ವಿಶ್ವಾಸಾನ್ ಪಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:14
28 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿ, ನಿನ್ನಲ್ಲಿ ದೋಷವೇನೂ ಇಲ್ಲ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು