Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:16 - ಕನ್ನಡ ಸಮಕಾಲಿಕ ಅನುವಾದ

16 ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೊ ಎಕ್ಲೊಚ್ ಕನ್ನಾಬಿ ಮರಾನ್‍ ನಸಲ್ಲೊ; ಕೊನಾಕ್ ಜಾವ್ಕ್ ಹೊಯ್‍ ನಸಲ್ಲ್ಯಾ ಉಜ್ವೊಡಾತ್ ರ್‍ಹಾತಲೊ. ತೆಕಾ ಕನ್ನಾಬಿ ಕೊನ್‍ಬಿ ಬಗುಕ್ನಾತ್ ಅನಿ ಬಗಿಬಿ ನಾತ್. ಮಾನ್ ಅನಿ ಕನ್ನಾಚ್ ಸರಿನಸಲ್ಲೊ ಬಳ್ ತೆಚೊಚ್ ಹೊಂವ್ದಿತ್! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:16
30 ತಿಳಿವುಗಳ ಹೋಲಿಕೆ  

ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.


ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.


“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್.


ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.


ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು