Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:18 - ಕನ್ನಡ ಸಮಕಾಲಿಕ ಅನುವಾದ

18 ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18-19 ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18-19 ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಂಕಾ ಹುಕುಮ್ ದಿ ತೆನಿ ಬರಿ ಕಾಮಾ ಕರುಂದಿತ್ ಮನುನ್ ಅನಿ ತೆಂಚ್ಯಾ ವೈನಾ ತೆನಿ ಸಾಂವ್ಕಾರ್ ಹೊಂವ್ದಿತ್. ಉದಾರ್ ಪಾನಾನ್ ರ್‍ಹಾಂವ್ದಿತ್ ಅನಿ ದುಸ್ರ್ಯಾಚ್ಯಾ ವಾಂಗ್ಡಾ ವಾಟುನ್ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:18
38 ತಿಳಿವುಗಳ ಹೋಲಿಕೆ  

ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


“ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.


ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.


ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು