Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:19 - ಕನ್ನಡ ಸಮಕಾಲಿಕ ಅನುವಾದ

19 ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ತೆನಿ ತೆಂಚ್ಯಾ ಫಿಡ್ಲ್ಯಾ ಎಳಾಸಾಟಿ ಎಕ್ ಘಟ್‍ಮುಟ್ ಪಾಯಾ ಬಾಂದುನ್ ಘೆತ್ಯಾತ್. ಅಶೆ ತೆನಿ ಹೆಚ್ಯಾ ವೈನಾ ತೆನಿ ಖರ್‍ಯಾ ಜಿವಾಕ್ ಧರುನ್ ಘೆವ್ನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:19
23 ತಿಳಿವುಗಳ ಹೋಲಿಕೆ  

ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.


ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು