Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:3 - ಕನ್ನಡ ಸಮಕಾಲಿಕ ಅನುವಾದ

3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕೊನ್ ಝುಟ್ಯಾ ಸಂಗ್ತಿಯಾ ಶಿಕ್ವುತಾತ್ ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ಖರ್‍ಯಾ ಗೊಸ್ಟಿಯಾ ಅನಿ ಅಮ್ಚಿ ಖರಿ ದೆವಸ್ಪಾನಾಚಿ ಶಿಕಾಪಾ ಮಾನುನ್ ಘೈಯ್ನಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:3
19 ತಿಳಿವುಗಳ ಹೋಲಿಕೆ  

ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.


ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು