1 ತಿಮೊಥೆಯನಿಗೆ 6:4 - ಕನ್ನಡ ಸಮಕಾಲಿಕ ಅನುವಾದ4 ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಗರುಕಿನ್ ಫುಗ್ಲಾ ಅನಿ ತೆಕಾ ಕಾಯ್ಬಿ ಕಳಿನಾ. ತೊ ಪಾಯ್ದ್ಯಾಕ್ ಪಡಿನಸಲ್ಯಾ ಆಶ್ಯಾನಿ ಖರ್‍ಯಾ ಗೊಸ್ಟಿಯಾಂಚ್ಯಾ ವಿಶಯಾತ್ ವಾದಿಕ್ ವಾದ್ ಕರ್‍ತಾ ಅನಿ ಗೊಸ್ಟಿಯಾಂಚೊ ಝಗ್ಡೊ ಕರ್‍ತಾ. ಹೆಚ್ಯಾ ವೈನಾ ಖುದ್ಗೆಪಾನ್, ಎಕಾಮೆಕಾತ್ನಿ ಪಡುನ್ ಯೆಯ್‍ನಸಲ್ಲೆ, ನಿಂದಾ ಅನಿ ಬುರ್ಶಿ ಗಾಳಿಯಾ ದಿತಲೆ ಯೆತಾ . ಅಧ್ಯಾಯವನ್ನು ನೋಡಿ |