Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:4 - ಕನ್ನಡ ಸಮಕಾಲಿಕ ಅನುವಾದ

4 ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರು ಪ್ರೀತಿಸಿದ ಸಹೋದರರೇ, ಆತನು ನಿಮ್ಮನ್ನು ಆದುಕೊಂಡನೆಂಬದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವ್ ತುಮ್ಚೊ ಪ್ರೆಮ್ ಕರ್‍ತಾ ಅನಿ ಅಪ್ನಾಚಿ ಸ್ವತಾಚಿ ಲೊಕಾ ಮನುನ್ ತುಮ್ಕಾ ತೆನಿ ಎಚುನ್ ಕಾಡ್ಲ್ಯಾನಾಯ್, ಹೆ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:4
14 ತಿಳಿವುಗಳ ಹೋಲಿಕೆ  

ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು