Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:6 - ಕನ್ನಡ ಸಮಕಾಲಿಕ ಅನುವಾದ

6 ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ಅಮ್ಚ್ಯಾ ಅನಿ ಧನಿಯಾಚ್ಯಾ ಸರ್ಕೆಚ್ ಚಲ್ಲ್ಯಾಸಿ, ಅನಿ ತುಮ್ಕಾ ತರಾಸ್ ರ್‍ಹಾಲ್ಯಾರ್‍ಬಿ ಪವಿತ್ರ್ ಆತ್ಮ್ಯಾನ್ ದಿಲ್ಲ್ಯಾ ಕುಶಿನ್ ಅಮಿ ದಿಲ್ಲಿ ಬರಿ ಖಬರ್ ಘೆಟ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:6
33 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತ ಯೇಸುವನ್ನು ಅನುಸರಿಸುವಂತೆಯೇ, ನೀವೂ ನನ್ನನ್ನು ಅನುಸರಿಸಿರಿ.


ಆದ್ದರಿಂದ ನೀವು ನನ್ನನ್ನು ಅನುಕರಣೆ ಮಾಡುವವರಾಗಿ ಇರಬೇಕು ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.


ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು