1 ಥೆಸಲೋನಿಕದವರಿಗೆ 2:15 - ಕನ್ನಡ ಸಮಕಾಲಿಕ ಅನುವಾದ15 ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜುದೆವಾನಿ ಜೆಜುಕ್ ಅಮ್ಚ್ಯಾ ಧನಿಯಾಕ್ ಅನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ, ಅನಿ ಅಮ್ಕಾಬಿ ತರಾಸ್ ದಿಲ್ಯಾನಿ. ತೆನಿ ದೆವಾಚ್ಯಾ ದಿಸ್ಟಿಕ್ ಲೈ ವಾಯ್ಟ್ ದಿಸ್ತಲೆ ಕರುಲ್ಯಾತ್, ಸಗ್ಳ್ಯಾ ಲೊಕಾಕ್ನಿ ತೆನಿ ವಿರೊದ್ ಹೊವ್ನ್ ಹಾತ್! ಅಧ್ಯಾಯವನ್ನು ನೋಡಿ |