Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸೈತ್ ಸುಟ್ಕಾ ದಿತಲಿ ಬರಿ ಖಬರ್ ಸಾಂಗುಕ್ ತೆನಿ ಅಮ್ಕಾ ಅಡ್ಕಳ್ ಕರಲ್ಲ್ಯಾನಿ, ಎವ್ಡೆ ಪತರ್ ತೆನಿ ಕರಲ್ಲ್ಯಾ ಪಾಪಾಂಚೊ ಮಾಪ್ ಭರುನ್ ವೊತುಕ್ ಲಾಗ್ಲಾ. ಅತ್ತಾ ಆಕ್ರಿಕ್ ದೆವಾಚೊ ರಾಗುಚ್ ತೆಂಚ್ಯಾ ವರ್‍ತಿ ಉತ್ರುನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:16
52 ತಿಳಿವುಗಳ ಹೋಲಿಕೆ  

ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.


ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


“ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.


ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.


ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.


ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು.


ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು