1 ಥೆಸಲೋನಿಕದವರಿಗೆ 2:2 - ಕನ್ನಡ ಸಮಕಾಲಿಕ ಅನುವಾದ2 ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅಮಿ ತುಮ್ಚೆಕ್ಡೆ ಥೆಸ್ಸಾಲೊನಿಕಾಕ್ ಯೆವ್ಚ್ಯಾ ಅದ್ದಿ ಫಿಲಿಪ್ಪಿ ಮನ್ತಲ್ಯಾ ಶಾರಾತ್ ಅಮ್ಕಾ ಕಶೆ ಚಾಲ್ವುಲ್ಯಾನಿ ಅನಿ ಕಸೆ ಅಮ್ಚಿ ಮರ್ಯಾದ್ ಕಾಡ್ಲ್ಯಾನಿ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಥೈ ಲೈ ವಿರೊದ್ ರ್‍ಹಾಲ್ಯಾರ್‍ಬಿ ಅಪ್ನಾಚಿ ಬರಿ ಖಬರ್ ತುಮ್ಕಾ ಸಾಂಗುಕ್ ಮನುನ್ ದೆವಾನುಚ್ ಅಮ್ಕಾ ಧೈರೊ ದಿಲ್ಯಾನ್. ಅಧ್ಯಾಯವನ್ನು ನೋಡಿ |