Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:6 - ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮ್ಚ್ಯಾಕ್ನಾ ಹೊಂವ್ದಿತ್, ದುಸ್ರ್ಯಾನಿಕ್ನಾ ಹೊಂವ್ದಿತ್ ಹೊಗ್ಳುನ್ ಘೆವ್ಚೆ ಮನುನ್ ಅಮಿ ಅಶೆ ಖಟ್ಪಟ್ ಕರುಕ್‍ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:6
24 ತಿಳಿವುಗಳ ಹೋಲಿಕೆ  

ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


“ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ಪುರುಷನು ಸ್ತ್ರೀಗಾಗಿ ಸೃಷ್ಟಿಯಾಗಲಿಲ್ಲ, ಸ್ತ್ರೀಯು ಪುರುಷನಿಗಾಗಿ ಸೃಷ್ಟಿಯಾದಳು.


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.


ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು