1 ಥೆಸಲೋನಿಕದವರಿಗೆ 4:13 - ಕನ್ನಡ ಸಮಕಾಲಿಕ ಅನುವಾದ13 ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಜೆ ಕೊನ್ ಮರ್ಲ್ಯಾತ್ ತೆಂಚ್ಯಾ ವಿಶಯಾತ್ಲೆ ಎಕ್ ಖರೆ ಅಮಿ ತುಮ್ಕಾ ಕಳ್ವುತಾಂವ್, ಕಶ್ಯಾಕ್ ಮಟ್ಲ್ಯಾರ್, ಬರೊಸೊ ನಸಲ್ಲ್ಯಾಂಚ್ಯಾ ಸಾರ್ಕೆ ಹೆಚ್ಯಾ ವಿಶಯಾತ್ ತುಮ್ಕಾ ಬೆಜಾರ್ ಹೊತಲೆ ನಕ್ಕೊ. ಅಧ್ಯಾಯವನ್ನು ನೋಡಿ |