Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:17 - ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ತನ್ನಾ ಪತರ್ ಝಿತ್ತೆ ಹೊತ್ತ್ಯಾಕ್ನಿ ಅಮ್ಕಾ ತೆಂಚ್ಯಾ ವಾಂಗ್ಡಾ ಕ್ರಿಸ್ತಾಕ್ ಭೆಟುಕ್ ಅಂತ್ರಾಳಾರ್ ಮೊಡಾಂಚ್ಯಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊತಾ, ಹೆಚ್ಯಾ ಮಾನಾ ಅಮಿ ಸದ್ದಿಚ್ ಧನಿಯಾಚ್ಯಾ ವಾಂಗ್ಡಾ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:17
33 ತಿಳಿವುಗಳ ಹೋಲಿಕೆ  

ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.


ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು