Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:15 - ಕನ್ನಡ ಸಮಕಾಲಿಕ ಅನುವಾದ

15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕೊನ್‍ಬಿ ವಾಯ್ಟಾಚ್ಯಾ ಬದ್ಲಾಕ್ ವಾಯ್ಟುಚ್ ಅನಿ ಎಕ್ಲ್ಯಾಕ್ ಕರಿನಸಿ ಸರ್ಕೆ ಬಗುನ್ ಘೆವಾ, ಅನಿ ಕನ್ನಾಬಿ ಸಗ್ಳ್ಯಾ ಎಳಾರ್ ಎಕಾಮೆಕಾತ್ನಿ ಅನಿ ಸಗ್ಳ್ಯಾ ಲೊಕಾಕ್ನಿ ಬರೆ ಕರುಸಾಟ್ನಿ ಖಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:15
39 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.


ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.


ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.


ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.


ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.


ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.


ನಿನ್ನ ಶತ್ರು ಬಿದ್ದರೆ ಆನಂದಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.


ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.


ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,


ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.


ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು.


ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.


ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.


ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.


ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು