Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:2 - ಕನ್ನಡ ಸಮಕಾಲಿಕ ಅನುವಾದ

2 ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ಧನಿಯಾಚೊ ದಿಸ್ ರಾಚ್ಚೆ ಯೆತಲ್ಯಾ ಚೊರಾ ಸರ್ಕೊ ಯೆತಾ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:2
13 ತಿಳಿವುಗಳ ಹೋಲಿಕೆ  

“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ಆಗ ಯೆಹೋಶುವನೂ ಅವನ ಸಂಗಡ ಇದ್ದ ಸೈನಿಕರೆಲ್ಲರೂ ಬಂದು ಫಕ್ಕನೆ ಮೇರೋಮ ಜಲಾಶಯದ ಬಳಿಯಲ್ಲಿ ಅವರ ಮೇಲೆ ದಾಳಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು